ಪೆರಡಾಲದಲ್ಲಿ 12ರಂದು ಶ್ರೀ ವರಮಹಾಲಕ್ಷ್ಮೀ ಪೂಜೆ

ಪೆರಡಾಲ, 06-08-2016:
ಪೆರಡಾಲ ಶ್ರೀ ಉದನೇಶ್ವರ ಸ್ವಾಮಿ ಸನ್ನಿಧಿಯಲ್ಲಿ 12ನೇ ತಾರೀಕು ಶುಕ್ರವಾರದಂದು ಶ್ರೀ ವರಮಹಾಲಕ್ಷ್ಮೀ ಪೂಜೆಯು ನಡೆಯಲಿರುವುದು. ಬೆಳಗ್ಗೆ 9 ಘಂಟೆಗೆ ಪೂಜೆ ಪ್ರಾರಂಭವಾಗಲಿರುವುದು. ಈ ಸಂದರ್ಭದಲ್ಲಿ ‘ವರಮಹಾಲಕ್ಷ್ಮೀ ಪೂಜೆಯ ಮಹತ್ವ’ ಎಂಬ ವಿಷಯದಲ್ಲಿ ವಿದ್ವಾನ್ ಕೇಕಣಾಜೆ ಕೇಶವ ಭಟ್ ಪ್ರವಚನ ನೀಡಲಿದ್ದಾರೆ. ಅಪರಾಹ್ನ 2.30ರಿಂದ ‘ತ್ರಿಶಂಕು ಸ್ವರ್ಗ’ ಯಕ್ಷಗಾನ ತಾಳಮದ್ದಳೆ ನಡೆಯಲಿದೆ. ಭಾಗವತರಾಗಿ ಪುತ್ತಿಗೆ ರಘುರಾಮ ಹೊಳ್ಳ, ಸಿರಿಬಾಗಿಲು ರಾಮಕೃಷ್ಣ ಮಯ್ಯ, ಚೆಂಡೆ ಮದ್ದಳೆಯಲ್ಲಿ ಶಂಕರನಾರಾಯಣ ಭಟ್ ಪದ್ಯಾಣ, ಲಕ್ಷ್ಮೀನಾರಾಯಣ ರಾವ್ ಅಡೂರು ಹಾಗೂ ಮುಮ್ಮೇಳದಲ್ಲಿ ವಿದ್ವಾನ್ ಕೃಷ್ಣ ಕುಮಾರ್ ಆಚಾರ್ಯ ಮೈಸೂರು, ವಿದ್ವಾನ್ ಕೇಕಣಾಜೆ ಕೇಶವ ಭಟ್ಟ, ತಾರಾನಾಥ ವರ್ಕಾಡಿ, ಸುಬ್ರಾಯ ಹೊಳ್ಳ ಕಾಸರಗೋಡು, ರವಿರಾಜ ಪನೆಯಾಲ ಮೊದಲಾದವರು ಭಾಗವಹಿಸಲಿರುವರು. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.